
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ನಿರೀಕ್ಷೆಗೂ ಮೀರಿ ಅಬ್ಬರಿಸುತ್ತಿದ್ದು, ಬಹುತೇಕ ಜಿಲ್ಲೆಗಳು ವರುಣನ ಆರ್ಭಟಕ್ಕೆ ಅಕ್ಷರಶಃ ತತ್ತರಿಸಿವೆ.
ಕಳೆದ ಎಂಟು ಹತ್ತು ದಿನಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸುರಿಯುತ್ತಿದ್ದ ಕುಂಭದ್ರೋಣ ಮಳೆ ಈಗ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ವ್ಯಾಪಿಸಿದೆ. ಎಲ್ಲೆಡೆ ನದಿ-ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು-ಸೇತುವೆಗಳು ಕೊಚ್ಚಿಹೋಗುವೆ. ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಇಷ್ಟೇ ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ತಗ್ಗು ಪ್ರದೇಶಗಳು ನಡುಗುಡ್ಡೆಗಳಾಗಿ ಮಾರ್ಪಟ್ಟಿದ್ದು, ನಿವಾಸಿಗಳ ಬದುಕು ಅತಂತ್ರವಾಗಿದೆ.
ಈ ಮಧ್ಯೆ, ಮತ್ತಷ್ಟು ದಿನ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಸುರಕ್ಷಣೆಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ16)ರಂದು ರಜೆ ಘೋಷಿಸಲಾಗಿದೆ.
Poll (Public Option)

Post a comment
Log in to write reviews