
ಬೆಂಗಳೂರು: ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ವಿ.ಸೋಮಣ್ಣರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ.
ರಾಜ್ಯದಿಂದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗಲಿದ್ದು, ಎಚ್.ಡಿ.ಕುಮಾರಸ್ವಾಮಿ ಅವರಿಗೂ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ.
ಈ ಮಧ್ಯೆ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿದ್ದು, ಈ ಸಂಬಂಧ ಪ್ರಧಾನಿ ಕಚೇರಿಯಿಂದ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಲಿಂಗಾಯರ ಕೋಟಾದಡಿಯಲ್ಲಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಗಲಿದ್ದು, ಅವರ ಪತ್ನಿ ಶೈಲಜಾ ಸೋಮಣ್ಣ ಹಾಗೂ ಕುಟುಂಬದವರು ಸಮಾರಂಭದಲ್ಲಿ ಭಾಗವಹಿಸಲು ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ. ಇಂದು ಬೆಳಗ್ಗಿನವರೆಗೂ ಈ ಸಂಬಂಧ ಯಾವುದೇ ಮಾಹಿತಿ ಇರಲಿಲ್ಲ. ಮಧ್ಯಾಹ್ನದ ವೇಳೆ ಸೋಮಣ್ಣ ಅವರ ಕುಟುಂಬ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್ ನಿಂದ ದೆಹಲಿಯತ್ತ ಪ್ರಯಾಣ ಬೆಳಸಿರುವುದು ಗಮನಿಸಿದರೆ ಸೋಮಣ್ಣಅವರಿಗೆ ಸಚಿವ ಸ್ಥಾನ ಗ್ಯಾರಟಿ ಎಂದಾಗಿದೆ. ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿಲು ರಾಜ್ಯದ ಸಂಸದರು ಈಗಾಗಲೇ ದೆಹಲಿ ತಲುಪಿದ್ದಾರೆ.
Poll (Public Option)

Post a comment
Log in to write reviews