
ಲೈಂಗಿಕ ದೌರ್ಜನ್ಯ ಹಿನ್ನೆಲೆ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ವಕೀಲ ದೇವರಾಜೇಗೌಡರಿಗೆ ಸಂಕಷ್ಟ ಎದುರಾಗಿದೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್ ವಿಚಾರಗಳು ಬಹಿರಂಗವಾಗಿವೆ. ಏಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ ದೂರು ನೀಡಲಾಗಿತ್ತು. ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸೈಟ್ ಮಾರಾಟ ಮಾಡಿಸಿಕೊಡುವ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
Poll (Public Option)

Post a comment
Log in to write reviews