
ಚಿಕ್ಕೋಡಿ: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಸಂಬಂಧಿತ ಪ್ರಕರಣ ಹಾಗೂ ಸಚಿವ ನಾಗೇಂದ್ರ ವಿಚಾರವನ್ನು ಸಿಬಿಐ ಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಆದರೆ, ಬಿಜೆಪಿಯವರು ಸುಮ್ಮನೆ ಆರೋಪ ಮಾಡಿದ್ದಾರೆ. ಹೀಗಾಗಿ ರಾಜಿನಾಮೆ ಪಡೆಯಲು ಆಗುವುದಿಲ್ಲ ಎಂದಿದ್ದಾರೆ.
ಪ್ರಕರಣ ಸಂಬಂಧ ಎಸ್ಐಟಿ ಮಧ್ಯಂತರ ವರದಿ ನೀಡಿದ ಮೇಲೆ ಸಿಎಂ ಈ ವಿಚಾರದ ಬಗ್ಗೆ ಗಮನ ಹರಿಸುತ್ತಾರೆ. ಯಾರೋ ಆರೋಪ ಮಾಡುತ್ತಾರೆ ಎಂದು ನಾವು ಕ್ರಮ ಕೈಗೊಳ್ಳಲು ಆಗುವುದಿಲ್ಲ. ಪ್ರಕರಣವನ್ನು ಸಿಬಿಐ ಗೆ ವಹಿಸುವ ಪ್ರಶ್ನೆಯೇ ಬರಲ್ಲ. ಈ ಬಗ್ಗೆ ಬ್ಯಾಂಕ್ ನವರು ಈಗಾಗಲೇ ಕೆಲ ದಾಖಲೆಗಳನ್ನು ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದು ಎಂದರು.
Poll (Public Option)

Post a comment
Log in to write reviews