ವಾಲ್ಮೀಕಿ ಹಗರಣವನ್ನು ಸಿ ಬಿ ಐ ಗೆ ವಹಿಸಲು ಯೂನಿಯನ್ ಬ್ಯಾಂಕ್ ಅರ್ಜಿ :ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಯೂನಿಯನ್ ಬ್ಯಾಂಕ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿ ವಿಚಾರಣೆ ವೇಳೆ ಬ್ಯಾಂಕ್ ಪರ ವಾದ ಮಂಡಿಸಿದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ವೆಂಕಟರಮಣಿ, "ವಾಲ್ಮೀಕಿ ನಿಗಮದಲ್ಲಿ ಬ್ಯಾಂಕ್ ಮೂಲಕ ದೊಡ್ಡ ಹಗರಣ ನಡೆದಿದೆ. ಆದರೆ, ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ. ಅಲ್ಲದೆ, ಬ್ಯಾಂಕ್ ಅಧಿಕಾರಿಗಳನ್ನು ತನಿಖೆಗೆ ಹಾಜರಾಗಲು ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಗೆ ತಡೆ ನೀಡಬೇಕು" ಎಂದು ಕೋರಿದರು.
ಆದರೆ, "ಬ್ಯಾಂಕ್ ಮೂಲಕ 50 ಕೋಟಿಗೂ ಹೆಚ್ಚಿನ ಹಗರಣ ನಡೆದಲ್ಲಿ ಸಿಬಿಐ ತನಿಖೆ ನಡೆಸಬೇಕು. ಹೀಗಾಗಿ ರಾಜ್ಯ ಸರ್ಕಾರದ ಎಸ್ಐಟಿ ತನಿಖೆಗೆ ರದ್ದು ಪಡಿಸಬೇಕು" ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ, ಎಸ್ಐಟಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
Poll (Public Option)

Post a comment
Log in to write reviews