
ಉಡುಪಿ: ಶಿವಮೊಗ್ಗ ಕಡೆಯಿಂದ ಬೈಂದೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ, ಚರಂಡಿಗಿಳಿದ ಘಟನೆ ಕೊಲ್ಲೂರು ಸಮೀಪದ ದಳಿಮುರ್ಕು ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಬಸ್ನಲ್ಲಿದ್ದ ಕೊಲ್ಲೂರು ಮೂಕಾಂಬಿಕಾ ಹೈಸ್ಕೂಲ್ನ 6 ವಿದ್ಯಾರ್ಥಿಗಳು ಹಾಗೂ 11 ಪಿಯುಸಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ.
ಗಾಯಗೊಂಡವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಮೂಳೆ ಮುರಿತವಾಗಿರುವುದು ತಿಳಿದು ಬಂದಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಅಪಘಾತದಿಂದ ಮಕ್ಕಳು ಕಂಗಾಲಾಗಿದ್ದು, ಬೈಂದೂರು ಬಿಇಒ ನಾಗೇಶ್ ನಾಯಕ್ ಹಾಗೂ ಹೆಚ್ಚುವರಿ ಎಸ್ಪಿ ಶಾಲೆಗೆ ಭೇಟಿ ನೀಡಿ ಧೈರ್ಯ ತುಂಬಿದರು.
Poll (Public Option)

Post a comment
Log in to write reviews