ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ – ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ₹ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ ₹ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ ₹ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ ₹ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು ಎಂದರು.
ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ದಿಪಡಿಸುವ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮ್ಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದ್ದು, ಸುಸಜ್ಜಿತ ಕಚೇರಿ ನಿರ್ಮಿಸಲಾಗುವುದು. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ ಎಂದು ಹೇಳಿದರು.
Poll (Public Option)

Post a comment
Log in to write reviews