ಕರ್ನಾಟಕ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ಖಂಡಿಸಿ ‘ಎಕ್ಸ್’ ನಲ್ಲಿ ಪೋಸ್ಟ್: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.
‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದಿರುವ ದಾಳಿಯಿಂದ ತೀವ್ರ ಆಘಾತವಾಗಿದೆ. ಈ ಹೇಯ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇಂತಹ ಹಿಂಸಾಚಾರಕ್ಕೆ ಯಾವುದೇ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಅವಕಾಶವಿಲ್ಲ. ಭಾರತವು ಅಮೆರಿಕದ ಜನರೊಂದಿಗೆ ನಿಂತಿದೆ. ಗಾಯಗೊಂಡವರ ಕುಟುಂಬಕ್ಕೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews