
ರಾಯಚೂರು: ಜಿಲ್ಲೆಯ ಕಸ್ತೂರ ಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ನಡೆದಿದೆ.
ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ
ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ. ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Poll (Public Option)

Post a comment
Log in to write reviews