ಬೆಂಗಳೂರು: ಕತ್ರಿಗುಪ್ಪೆ ನಿವಾಸಿ ಪುರುಷೋತ್ತಮ್ ಮನೆಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಗೋವಾ ಲಿಕ್ಕರ 144 ಬಾಟಲಿ ಅನ್ನು ನಗರದ ದಕ್ಷಿಣ ವಿಭಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 144 ಬಾಟಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಅ.27 ರಂದು ಪುರುಷೋತ್ತಮ್ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಬನಶಂಕರಿ ಎರಡನೇ ಹಂತದಲ್ಲಿ ನಿಂತಿದ್ದ. ಆತನ ಚಲನವಲನ ಅಬಕಾರಿ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸಿತ್ತು. ಈ ವೇಳೆ ಬ್ಯಾಗ್ ತೆಗೆದು ಪರಿಶೀಲಿಸಿದಾಗ ಮದ್ಯದ ಬಾಟಲ್ ಪತ್ತೆಯಾಗಿದೆ. ಬಾಟಲ್ ಮೇಲೆ ಫಾರ್ ಸೇಲ್ ಇನ್ ಗೋವಾ ಓನ್ಲಿ ಎಂದು ನಮೂದಾಗಿದ್ದು ಕಂಡು ಅವುಗಳು ಗೋವಾದಲ್ಲಿ ತಯಾರಿಸಲಾಗಿದ್ದ ಮದ್ಯದ ಬಾಟಲ್ ಎಂದು ತಿಳಿದಿದೆ. ಆರೋಪಿ ಗೋವಾದಲ್ಲಿರುವ ಅಂಗಡಿಯವರ ಸಂಪರ್ಕದ ಮೇರೆಗೆ ಬೆಂಗಳೂರಿಗೆ ಮದ್ಯ ತರಿಸಿಕೊಳ್ಳುತ್ತಿದ್ದ. ನಂತರ ಮನೆಗೆ ತೆಗೆದುಕೊಂಡು ಹೋಗಿ ಸ್ಟಾಕ್ ಮಾಡುತ್ತಿದ್ದ. ನಂತರ ಕಡಿಮೆ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ.
ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಗೋವಾ ರಾಜ್ಯದ ಮದ್ಯದ ಅಂಗಡಿ ಜೊತೆಗಿನ ನಂಟು ಬಯಲಾಗಿದೆ. ಜೊತೆಗೆ ಮದ್ಯ ತರಿಸಿದ್ದ ಬಿಲ್ಲುಗಳು ಕೂಡ ಪತ್ತೆಯಾಗಿದೆ. ನಂತರ ಕತ್ರಿಗುಪ್ಪೆ ಮನೆಗೆ ಕರೆದೊಯ್ದು ಶೋಧಿಸಿದಾಗ. ಮನೆಯಲ್ಲಿದ್ದ ಮದ್ಯದ ಬಾಟಲ್‌ಗಳನ್ನು ನೋಡಿ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ), 43(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ), 43(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
Post a comment
Log in to write reviews