
ಬೆಂಗಳೂರು : ಟಾಕ್ಸಿಕ್ ಸಿನಿಮಾ 150 ದಿನಗಳ ಚಿತ್ರೀಕರಣ ಲಂಡನ್‌ನಲ್ಲಿ ನಡೆಯಲಿದೆ.
ಈಗಾಗಲೇ ಸದ್ದಿಲ್ಲದೇ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಶುರುವಾಗಿದೆ. ಯಶ್, ನಯನತಾರಾ ಕ್ಯಾಮರಾ ಮುಂದೆ ನಿಂತಿದ್ದಾರೆ ಎಂದು ವರದಿಯಾಗಿದೆ. ಭಾರತದಲ್ಲಿ ಒಂದಷ್ಟು ಚಿತ್ರೀಕರಣ ಮುಗಿದ ಬಳಿಕ ಲಂಡನ್‌ನಲ್ಲಿ 150 ದಿನಗಳ ಚಿತ್ರೀಕರಣ ನಡೆಸಲಿದ್ದಾರೆ. ಯುಕೆಯಲ್ಲಿ ಚಿತ್ರದ ಪ್ರಮುಖ ಸನ್ನಿವೇಶಗಳನ್ನು ಸೆರೆ ಹಿಡಿಯಲಿದ್ದಾರೆ.
ಚಿತ್ರದಲ್ಲಿ ನಟ ಯಶ್ ಸ್ಟೈಲಿಶ್ ಡಾನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗ್ತಿದೆ. ಪೀಕಿ ಬ್ಲೈಂಡರ್ ಸೀರಿಸ್ ಶೈಲಿಯಲ್ಲಿ 'ಟಾಕ್ಸಿಕ್' ಸಿನಿಮಾ ಮೂಡಿ ಬರಲಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದ್ದು ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ನಟ ಯಶ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅದ್ಧೂರಿ ಸೆಟ್‌ಗಳನ್ನು ನಿರ್ಮಿಸಿ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ.
Poll (Public Option)

Post a comment
Log in to write reviews