
ಉತ್ತರಪ್ರದೇಶ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 18 ಜನರು ಸಾವನ್ನಪ್ಪಿದ್ದಾರೆ ಮತ್ತು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಉನ್ನಾವೋ ಜಿಲ್ಲೆಯ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಧಾ ಗ್ರಾಮದ ಬಳಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಕಂಟೇನರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 18 ಜನರು ಸಾವನ್ನಪ್ಪಿದ್ದು ಸುಮಾರು 30ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಸ್ಥಳದಲ್ಲಿ ಸಾವು-ನೋವುಗಳ ಸರಮಾಲೆಯನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಮಾಹಿತಿ ಮೇರೆಗೆ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್‌ಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
Poll (Public Option)

Post a comment
Log in to write reviews