
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಧಾರ್ಮಿಕ ಕ್ಷೇತ್ರವಾಗಿರುವ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, ಈ ಬಾರಿ ಮಾದಪ್ಪನ ಹುಂಡಿಯಲ್ಲಿ 2 ಕೋಟಿ, 58 ಲಕ್ಷ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್‌ನಲ್ಲಿ ಮಹದೇಶ್ವರ ಬೆಟ್ಟದ ಹುಂಡಿಗಳನ್ನು ಎಣಿಕೆ ಮಾಡಲಾಯಿತು. ಕಳೆದ 30 ದಿನಗಳಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಬಂದಿದೆ 93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಅಕ್ಷಯ ತದಿಗೆ, ಅಮಾವಾಸ್ಯೆ ಮತ್ತು ಸರ್ಕಾರಿ ಹಾಗೂ ಬೇಸಿಗೆ ರಜೆಯ ದಿನಗಳಂದು ಹೆಚ್ಚಿನ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು.
Poll (Public Option)

Post a comment
Log in to write reviews