
ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಬೆನ್ನಲ್ಲೇ ಇದೀಗ ಪ್ರಕ್ಷುಬ್ದಗೊಂಡಿದ್ದ ದಾವಣಗೆರೆ ನಗರ ಇದೀಗ ಸಹಜ ಸ್ಥಿತಿಗೆ ಮರಳಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಎರಡು ಕೋಮಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಈವರೆಗೆ ದಾಖಲಾಗಿರುವ 4 ಪ್ರಕರಣಗಳಲ್ಲಿ 30 ಜನರನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ನಗರದ ಕೆಲವೆಡೆ ಗಣೇಶ ವಿಸರ್ಜನೆ ಬಾಕಿ ಇರುವ ಹಿನ್ನೆಲೆಯಲ್ಲಿ ಇನ್ನೂ 2 ದಿನ ಮದ್ಯ ಮಾರಾಟ ನಿಷೇಧಿಸುವಂತೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಹರಿಹರ ತಾಲೂಕಿನ ಮಲೇಬೆನ್ನೂರು ಹಾಗೂ ಚನ್ನಗಿರಿ ತಾಲೂಕಿನಾದ್ಯಂತ ಸೆ. 22 ರಂದು ಗಣೇಶಮೂರ್ತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ಸ್ಥಗಿತಗೊಳಿಸುವಂತೆ ಅವರು ಆದೇಶ ಹೊರಡಿಸಿದ್ದಾರೆ.
Poll (Public Option)

Post a comment
Log in to write reviews