ಟಾಪ್ 10 ನ್ಯೂಸ್
ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ 20 ಲಕ್ಷ ನಗದು 500 ಗ್ರಾಂ ಚಿನ್ನ ಕಳವು

ಚಾಮರಾಜನಗರ: ಮನೆ ಬಾಗಿಲು ಮುರಿದು ಮದುವೆಗೆ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳ್ಳರು ದರೋಡೆ ಮಾಡಿರುವ ಘಟನೆ ಹನೂರು ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಹನೂರು ಪಟ್ಟಣದ 11ನೇ ವಾರ್ಡ್ನ ನಿವಾಸಿ ಚಿನ್ನದೊರೆ ಎಂಬವರು ತಮ್ಮ ಮಗಳ ಮದುವೆ ಖರ್ಚಿಗಾಗಿ ಮನೆಯಲ್ಲಿ 20 ಲಕ್ಷ ನಗದು ಹಾಗೂ 500 ಗ್ರಾಂ ಚಿನ್ನ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿ ಸೋಮವಾರ ತಡರಾತ್ರಿ ವಾಪಸ್ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಚಾಮರಾಜನಗರದ ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಹನೂರು ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews