
ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಅ.31ರಿಂದ ನ.1ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಜೊತೆಗೆ, ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.03 ಮತ್ತು ನ.04ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
Poll (Public Option)

Post a comment
Log in to write reviews