2024-12-24 06:53:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿ

ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯ ಗೌರವ. ಆರೋಗ್ಯ ಪ್ರಚಾರಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಈ ಪ್ರಶಸ್ತಿಲಭಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ, ಮನ್ಸುಖ್ ಮಾಂಡವಿಯಾ, ನಿಮ್ಹಾನ್ಸ್ ಅನ್ನು ಅಭಿನಂದಿಸಿದ್ದಾರೆ. ಮತ್ತು ಆರೋಗ್ಯ ರಕ್ಷಣೆಯಲ್ಲಿ ಭಾರತದ ಪ್ರಯತ್ನಗಳಿಗೆ ಮನ್ನಣೆ ದೊರಕಿರುವುದು ಬಹುದೊಡ್ಡ ಸಾಧನೆ ಎಂದು ಹೇಳಿದ್ದಾರೆ.
2019 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ[ WHO ] ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನ ನೀಡಲು ಪ್ರಾರಂಭಿಸಿತ್ತು, ಆರೋಗ್ಯ ಪ್ರಚಾರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನ ನೀಡುತ್ತಾ ಬಂದಿದೆ.
ಈ ಪ್ರಶಸ್ತಿಯು ನಿಮ್ಹಾನ್ಸ್‌ನ ಸಮರ್ಪಣೆ ,ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಅತ್ಯುತ್ತಮ ಕೊಡುಗೆಗಳಿಗೆ ಸಾಕ್ಷಿಯಾಗಿದೆ.

Post a comment

No Reviews