
ಶಿವಮೊಗ್ಗ: ಎರಡು ಕಾರುಗಳು ಪರಸ್ಪತ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಯನ್ ಸಫಾರಿ ಬಳಿ ನಡೆದಿದೆ.
ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ದುರಂತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews