
ನವದೆಹಲಿ: ಮುಂಬರುವ 2025ರ ಸಾಲಿನ ಐಪಿಎಲ್ 18ನೇ ಆವೃತ್ತಿಗೆ ಪೂರ್ವಭಾವಿಯಾಗಿ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಅದಕ್ಕೆ ಮುನ್ನ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ.
ಜೊತೆಗೆ ಹರಾಜಿನಲ್ಲಿ ಒಂದು ರೈಟ್ ಟು ಮ್ಯಾಚ್ (ಆರ್‌ಟಿಎಂ) ಕಾರ್ಡ್ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಕೆಲ ತಂಡಗಳು 6 ರಿಂದ 8 ಆಟಗಾರರನ್ನೂ ರಿಟೇನ್ ಮಾಡಿಕೊಳ್ಳಲು ಒಲವು ಹೊಂದಿವೆ. ಆದರೆ ಇತರ ಕೆಲ ತಂಡಗಳು ಇದನ್ನು ವಿರೋಧಿಸಿವೆ.
ಐಪಿಎಲ್‌ನಲ್ಲಿ ಹರಾಜು ಪ್ರಕ್ರಿಯೆ ಪ್ರಮುಖ ಭಾಗವಾಗಿದ್ದು, ಹೆಚ್ಚಿನ ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದರೆ ಇದು ನಿರುಪಯುಕ್ತ ಎನಿಸಲಿದೆ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಆರ್‌ಟಿಎಂ ಅನ್ವಯ ಫ್ರಾಂಚೈಸಿ, ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಹೆಚ್ಚಿನ ಆರ್‌ಟಿಎಂ ಬಳಸಲು ಅವಕಾಶ ನೀಡಿದರೂ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎನ್ನಲಾಗಿದೆ. ಹೀಗಾಗಿ ಬಿಸಿಸಿಐ 3+1 ಸೂತ್ರಕ್ಕೆ ಅಂಟಿಕೊಳ್ಳುವ ನಿರೀಕ್ಷೆ ಇದೆ. ಐಪಿಎಲ್‌ನಲ್ಲಿ ಇದುವರೆಗೆ ವಿರಾಟ್ ಕೊಹ್ಲಿ (ಆರ್‌ಸಿಬಿ), ಸಚಿನ್ ತೆಂಡುಲ್ಕರ್, ಜಸ್‌ಪ್ರೀತ್ ಬುಮ್ರಾ ಮತ್ತು ಲಸಿತ್ ಮಾಲಿಂಗರಂಥ ಪ್ರಮುಖ ಆಟಗಾರರು ಮಾತ್ರ ಒಂದೇ ತಂಡದ ಪರ ಆಡಿದ್ದಾರೆ.
Poll (Public Option)

Post a comment
Log in to write reviews