
ಚೆನ್ನೈ: ಕಳ್ಳಭಟ್ಟಿ ಕುಡಿದು 30 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಅಸ್ವಸ್ಥರಿಗೆ ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿದ ಕಾರಣ ಈ ಪ್ರಕರಣ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಅಂದಾಜಿಸಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತೆ ಮತ್ತು ಸಮಾಜವನ್ನು ಹಾಳುಗೆಡುವ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕೂಡಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ.ಸ್ಟಾಲಿನ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ
Poll (Public Option)

Post a comment
Log in to write reviews