ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಇದರಿಂದಾಗಿ ಸುಮಾರು 3000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಆರೋಪಿಸಿದ್ದಾರೆ.
ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆದರು ಕೂಡ ಫಲಿತಾಂಶ ಪ್ರಕಟವಾಗಿಲ್ಲ. ವಿಟಿಯು ಅಂತಹ ಸಂಸ್ಥೆಯು ಆಧುನಿಕ ತಾಂತ್ರಿಕತೆ ಬಳಸಿಕೊಂಡು ಕೇವಲ 3 ಗಂಟೆಯಲ್ಲಿ ಫಲಿತಾಂಶ ಪ್ರಕಟಿಸುತ್ತಿದೆ. ಆದರೆ ಸಿಇಟಿ ಪರೀಕ್ಷಾ ಫಲಿತಾಂಶ ಸರ್ಕಾರ ಪ್ರಕಟಿಸಿಲ್ಲ. ಇದರ ಹಿಂದೆ ದೊಡ್ಡ ಹುನ್ನಾರವಿದೆ ಎಂದರು.
ಒಟ್ಟು 60,000 ಸೀಟುಗಳನ್ನ ಮಾರಾಟಕ್ಕೆ ಇಡಲಾಗಿದ್ದು ಖಾಸಗಿ ಕಾಲೇಜುಗಳು ಒಂದು ಸೀಟನ್ನು 3 ಲಕ್ಷದಿಂದ 25 ಲಕ್ಷಗಳವರೆಗೆ ಮಾರಾಟ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಒಂದು ಅರ್ಜಿಗೆ ಸುಮಾರು 1200 ನಿಗದಿ ಮಾಡುವ ಮೂಲಕ 4.80 ಕೋಟಿ ರುಪಾಯಿ ಆದಾಯ ಮಾಡಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಸೀಟು ಸಿಗುತ್ತದೆಯೋ ಇಲ್ಲವೋ ಎನ್ನುವ ಗೊಂದಲದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಕಾಲೇಜುಗಳಲ್ಲಿ ಹಣ ಕಟ್ಟಿ ದಾಖಲೆ ಮಾಡಿದ್ದಾರೆ. ಒಂದು ವೇಳೆ ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟು ಸಿಕ್ಕರೆ ಅವರು ಕಟ್ಟಿರುವ ಪೂರ್ತಿ ಶುಲ್ಕವನ್ನು ಖಾಸಗಿ ಕಾಲೇಜುಗಳು ವಾಪಸ್ ಕೊಡುವಂತೆ ಸರ್ಕಾರ ಆದೇಶ ಮಾಡಬೇಕು. ಇಲ್ಲವಾದಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Post a comment
Log in to write reviews