
ಇಂದೋರ್: ಗಂಡ ಬೈದಿದ್ದಕ್ಕೆ ಇಲ್ಲೊಬ್ಬಳು ಮಹಿಳೆ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎನ್ನಲಾಗಿದೆ.
ಪತಿಯ ಜೊತೆ ಜಗಳವಾಡಿ ನೊಂದ 27 ವರ್ಷದ ಮಹಿಳೆ ತಾನು ವಾಸವಿದ್ದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ್ ಟೌನ್‍ಶಿಪ್‌ನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೃತರನ್ನು ಇಡಬ್ಲ್ಯೂಎಸ್ ಕ್ವಾರ್ಟರ್ಸ್ ನಿವಾಸಿ ಅಂಗೂರಿ ಬಾಯಿ ಎಂದು ಗುರುತಿಸಲಾಗಿದೆ. ಪತಿ ಆಕೆಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಹಾಗಾಗಿ ಅವಳು ಕಟ್ಟಡದ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಮಹಿಳೆ ಸಾಗರ ಮೂಲದವಳು. ಆಕೆಯ ಪತಿ ರಾಹುಲ್ ಲೋಧಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews