2024-12-24 07:39:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಗ್ನಿ ದುರಂತಕ್ಕೆ 40 ಭಾರತೀಯರ ಸಾವು

ನವದೆಹಲಿ: ಕುವೈತ್‌ನ ಮಂಗಾಫ್‌ ನಗರದಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 40 ಭಾರತೀಯರು ಸೇರಿ 53 ಜನರು ಮೃತಪಟ್ಟಿದ್ದಾರೆ.
ಬುಧವಾರ ಮುಂಜಾನೆ ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಸುಮಾರು 160 ಜನರು ವಾಸಿಸುತ್ತಿದ್ದರು ಮತ್ತು ಅದೇ ಕಂಪೆನಿಯಲ್ಲಿಅವರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಕಟ್ಟಡದಲ್ಲಿ ತಂಗಿದ್ದ ಹೆಚ್ಚಿನ ಕಾರ್ಮಿಕರು ಭಾರತೀಯರು ಎಂದು ವರದಿಯಾಗಿದೆ.
ಕಾರ್ಮಿಕರೆಲ್ಲ ಕೇರಳ, ತಮಿಳುನಾಡು ಮತ್ತು ಉತ್ತರ ಭಾರತದವರು ಇದ್ದಾರೆ ಎನ್ನಲಾಗಿದೆ.  ಕೇರಳದ ಉದ್ಯಮಿಗೆ ಸೇರಿದ  ಎನ್‌ಬಿಟಿಸಿ ಗ್ರೂಪ್‌ ಒಡೆತನದ ಕಟ್ಟಡ ಇದೆಂದು ಹೇಳಲಾಗಿದ್ದು, ಎನ್‌ಬಿಟಿಸಿ ಸೂಪರ್‌ಮಾರ್ಕೆಟ್‌ ಉದ್ಯೋಗಿಗಳೂ ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದರೆನ್ನಲಾಗಿದೆ.
ಅವಘಡದ ಬೆನ್ನಲ್ಲಿ ಭಾರತೀಯ ಕಾರ್ಮಿಕರನ್ನುಒಳಗೊಂಡ ದುರಂತ ಬೆಂಕಿ-ಅಪಘಾತಕ್ಕೆ ಸಂಬಂಧಿಸಿದಂತೆ ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ +965-65505246ನ್ನು ನೀಡಿದ್ದು, ತುರ್ತು ಅವಶ್ಯಕತೆ ಇದ್ದಲ್ಲಿ ಸಂಪರ್ಕಿಸಲು ಸೂಚಿಸಿದೆ. ಸಾಧ್ಯವಿರುವ ಎಲ್ಲ ಸಹಾಯ ನೀಡಲು ರಾಯಭಾರ ಕಚೇರಿ ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.
ಕುವೈತ್ ನಗರದಲ್ಲಿ ಬೆಂಕಿ ಅವಘಡದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ರಾಯಭಾರಿ ಸ್ಥಳಕ್ಕೆ ಹೋಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ. ಅಲ್ಲದೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ನಮ್ಮ ರಾಯಭಾರ ಕಚೇರಿಯು ಸಂಪೂರ್ಣ ಸಹಾಯವನ್ನು ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಕಂಪೆನಿ ಮತ್ತು ಕಟ್ಟಡ ಮಾಲೀಕರ ದುರಾಸೆಯ ಪರಿಣಾಮ ಈ ಘಟನೆ ಸಂಭವಿಸಿದೆ. ಕಟ್ಟಡದ ವಿಚಾರಕ್ಕೆ ಸಂಬಂಧಿಸಿ ಸರಿಯಾಗಿ ನಿಯಮ ಪಾಲಿಸಲಾಗಿಲ್ಲ. ಒಂದು ವಸತಿ ಕಟ್ಟಡದಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಕೂಡಿಟ್ಟಿರುವ ಬಗ್ಗೆ ಪರಿಶೀಲನೆ ಕೂಡ ನಡೆಸಲು ಕುವೈತ್ ಪುರಸಭೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸಚಿವರು ನಿರ್ದೇಶನ ನೀಡಿದ್ದಾರೆ. ಅಲ್ಲದೆ ಹತ್ತಾರು ಮಂದಿಯನ್ನು ರಕ್ಷಿಸಲಾಗಿದೆ. ದುರಂತವೆಂದರೆ ಹಲವು ಮಂದಿ ಹೆಚ್ಚು ಹೊಗೆ ಆವರಿಸಿದ ಪರಿಣಾಮ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕುವೈತ್‌ನ ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸುಫ್ ಅಲ್-ಸಬಾಹ್ ಅವರು ಬುಧವಾರ ಬೆಂಕಿ ಅವಘಢ ಸಂಭವಿಸಿದ ಮಂಗಾಫ್ ಕಟ್ಟಡದ ಮಾಲೀಕರು, ಕಟ್ಟಡದ ಸೆಕ್ಯೂರಿಟಿ ಮತ್ತು ಕಾರ್ಮಿಕರಿಗೆ ಹೊಣೆಗಾರರಾಗಿರುವ ಕಂಪನಿಯ ಮಾಲೀಕರು ಸೇರಿದಂತೆ ಘಟನೆಗೆ ಕಾರಣರಾದವರ ಬಂಧನಕ್ಕೆ ಸೂಚಿಸಿದ್ದಾರೆ.
 

Post a comment

No Reviews