
ಬೆಳಗಾವಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥರಾಗಿರುವ ಘಟನೆ ಬೆಳಾಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ಹೂಲಿಕಟ್ಟೆ ಗ್ರಾಮದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯ ವೇಳೆ ದೇವಸ್ಥಾನದಲ್ಲಿ ಮಾವಿನ ಹಣ್ಣಿನ ಶೀಖರಣೆ ಪ್ರಸಾದ ತಯಾರಿಸಿಟ್ಟಿದ್ದರು. ಆ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿತ್ತು. ಅದನ್ನು ಸೇವಿಸಿದ ಜನರಲ್ಲಿ ಏಕಾಏಕಿ ವಾಂತಿ ಭೇದಿ ಶುರುವಾಗಿದೆ. ಇದರಿಂದಾಗಿ 46 ಭಕ್ತರು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಾಗೂ ಗಂಭೀರ ಸ್ಥಿತಿಯಲ್ಲಿದ್ದ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Poll (Public Option)

Post a comment
Log in to write reviews