2024-12-24 05:46:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

 ಸೇನಾ ವಾಹನ ಮುಳಗಿ 5 ಯೋಧರು ಹುತಾತ್ಮ

ಲಡಾಕ್‌: ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಶ್ಯೋಕ್ ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಮೃತಪಟ್ಟ ಐವರು ಯೋಧರನ್ನು ಜೂನಿಯರ್ ಕಮಿಷನ್ಡ್ ಆಫೀಸರ್ ಎಂದು ಗುರುತಿಸಲಾಗಿದೆ.
ಲಡಾಕ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಟಿ -72 ಟ್ಯಾಂಕ್‌ ನದಿ ದಾಟುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅಪಘಾತದ ವೇಳೆ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದ ಸೈನಿಕರು ತಮ್ಮ ಟಿ -72 ಟ್ಯಾಂಕ್‌ನಲ್ಲಿ ಲೇಹ್‌ನಿಂದ 148 ಕಿ.ಮೀ. ದೂರದಲ್ಲಿರುವ, ಚೀನಾ ಗಡಿ ಸಮೀಪದ ದೌಲತ್ ಬೇಗ್ ಓಲ್ಡಿಯ ಮಂದಿರ್ ಮೋರ್ಹ್ ಬಳಿ ನದಿಯನ್ನು ದಾಟುತ್ತಿದ್ದರು.
ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ನದಿ ದಾಟುವಾಗ ನೀರಿನ ಮಟ್ಟದಲ್ಲಿ ಧೀಡಿರ್‌ ಏರಿಕೆಯಿಂದ ಈ ದುರ್ಘಟನೆ ನಡೆದಿದೆ. ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆʼʼ ಎಂದು ಸೇನಾ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದೂ ಸೇನಾ ಅಧಿಕಾರಿ ತಿಳಿಸಿದ್ದಾರೆ. ಹಿಮ ಕರಗುವಿಕೆಯಿಂದಾಗಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದೆ.
ರಾಜನಾಥ್‌ ಸಿಂಗ್‌ ಸಂತಾಪ:
ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಸಂತಾಪ ಸೂಚಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Post a comment

No Reviews