
ಬೆಂಗಳೂರು: ನಾಡ ಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು. ಕಚೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಹಾಗೂ ಕೆಂಪೇಗೌಡರ ಸೂಸೆ ಮಹಾತ್ಯಾಗಿ ಲಕ್ಷ್ಮೀ ದೇವಿ ಅವರ ಪ್ರತಿಮೆಗಳಿಗೆ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಮಾಲಾರ್ಪಣೆ ಹಾಗೂ ಪುಷ್ಪ ನಮನ ಅರ್ಪಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸೂರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ, ಲಕ್ಷ್ಮೀದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews