
ಅಸ್ಸಾಂ: ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. 29 ಜಿಲ್ಲೆಗಳಲ್ಲಿ 21 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಮತ್ತು 57,018 ಹೆಕ್ಟೇರ್ ಬೆಳೆ ಜಲಾವೃತಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಸ್ಸಾಂನ ಪ್ರಮುಖ ನದಿಗಳಾದ ಬ್ರಹ್ಮಪುತ್ರಾ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹ, ಭೂಕುಸಿತ, ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.
ಧುಬ್ರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಗೊಳಗಾಗಿದ್ದು, 6,48,806 ಮಂದಿ ತೊಂದರೆಗೆ ಸಿಲುಕಿದ್ದಾರೆ. ದರಾಂಗ್‌ನಲ್ಲಿ 1,90,261, ಕಾಚಾರ್‌ನಲ್ಲಿ 1,45,926, ಬರ್ಪೆಟಾದಲ್ಲಿ 1,31,041 ಹಾಗೂ ಗೋಲಾಘಾಟ್‌ನಲ್ಲಿ 1,08,594 ಮಂದಿ ತೊಂದರೆಗೆ ಸಿಲುಕಿದ್ದಾರೆ.
ಪ್ರಸ್ತುತ 39,338 ಸಂತ್ರಸ್ತರು 698 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಮತ್ತಷ್ಟು 7,24,322 ಶಿಬಿರೇತರ ಮಂದಿಗೆ ಪರಿಹಾರ ಸಾಮಗ್ರಿ ವಿತರಿಸಲಾಗಿದೆ. ದೋಣಿ ಬಳಸಿ 1,000ಕ್ಕೂ ಹೆಚ್ಚು ಮಂದಿ ಹಾಗೂ 635 ಪ್ರಾಣಿಗಳನ್ನು ರಕ್ಷಿಸಲಾಗಿದೆ.
Poll (Public Option)

Post a comment
Log in to write reviews