
ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬೃಹತ್ ಕಟ್ಟಡವೊಂದು ನೆಲಕ್ಕುರುಳಿದ್ದು, ನಾಲ್ವರನ್ನ ಬಲಿ ಪಡೆದಿದೆ. ಇನ್ನೇನು ಫಿನಿಷಿಂಗ್ ಹಂತದಲ್ಲಿದ್ದ ಬಿಲ್ಡಿಂಗ್ ಕುಸಿಯುತ್ತಿರುವುದು ಹಿಂಬದಿಯ ಬಿಲ್ಡಿಂಗ್ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ರೆಕಾರ್ಡ್ ಆಗಿದೆ.
ಬೆಂಗಳೂರಿನ ಹೆಣ್ಣೂರು ಸಮೀಪ ಇರೋ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಕಟ್ಟಡ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವನನ್ನ ರಕ್ಷಣೆ ಮಾಡಲಾಗಿದೆ. ಆತನನ್ನ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಿರುವ ಅಗ್ನಿಶಾಮಕ ದಳ, ಅರ್ಷದ್, ತುಳಸಿ, ಏಳುಮಲೈ ಕಿರುಪಾಲ್, ಪಾಸ್ವಾನ್, ಗಜೇಂದ್ರನಿಗಾಗಿ ತನ್ನ ರಕ್ಷಣಾ ಕಾರ್ಯ ಮುಂದುವರೆಸಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ದುರಂತ ನಡೆದ ಸ್ಥಳ ಪರಿಶೀಲಿಸಿದರು. ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಟ್ಟಡ ಮಾಲೀಕ ಹಾಗೂ ಕಂಟ್ರಾಕ್ಟರ್ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು.
Poll (Public Option)

Post a comment
Log in to write reviews