
ಚಿತ್ರದುರ್ಗ: ಆರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ ನಡೆದಿದೆ.
ಡ್ರೀಮ್ ವರ್ಡ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ 6 ವಿದ್ಯಾರ್ಥಿಗಳಾದ ಶ್ರೇಯಸ್, ಧನುಷ್, ಮನು, ತರುಣ್, ಸಿದ್ದೇಶ್ ಹಾಗೂ ಯಶಸ್ ನಾಪತ್ತೆಯಾದ ವಿದ್ಯಾರ್ಥಿಗಳು ಎಂದು ತಳಿದು ಬಂದಿದೆ
ಈ ಆರು ಜನ ವಿದ್ಯಾರ್ಥಿಗಳು, ಶಾಲೆಯ ವಸತಿ ಶಾಲೆಯಲ್ಲಿದ್ದರು. ಆದರೆ, ಇಂದು(ಬುಧವಾರ) ಬೆಳಗ್ಗೆಯಿಂದ ನಾಪತ್ತೆ ಆಗಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಗಳಿಗಾಗಿ ಹುಡುಕಾಟ ಶುರುವಾಗಿದೆ. ಇನ್ನು ವಿದ್ಯಾರ್ಥಿಗಳ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews