
ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಡೆಂಗ್ಯೂನಿಂದ ಬಳಲುತ್ತಿದ್ದ ಆಸಿಫ್ ಎಂಬವರ ಪುತ್ರಿ (6) ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು. ನನ್ನ ಮಗಳಿಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು ಎಂದು ಸಾನಿಯಾರ ತಂದೆ ಆಸಿಫ್ ಹೇಳಿದ್ದಾರೆ.
Poll (Public Option)

Post a comment
Log in to write reviews