
ಮೇ 7ರ ಸಂಜೆ ಸುರಿದ ಜಡಿ ಮಳೆಗೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಹೈದರಾಬಾದ್ ಬಾಚುಪಲ್ಲಿ ರೇಣುಕಾ ಎಲ್ಲಮ್ಮ ಕಾಲೊನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಒಡಿಶಾ ಮತ್ತು ಛತ್ತೀಸ್‌ಗಡ್ ನಿವಾಸಿಗಳೆಂದು ಗುರುತಿಸಲಾಗಿದೆ.
ರಕ್ಷಣಾ ಸಿಬ್ಬಂದಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಗಾಂಧಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews