2024-12-24 07:55:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ, ಪೋಷಕರ ಆಕ್ರಂದನ

ಚಿಕ್ಕಮಗಳೂರು : ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.  ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಮೃತ ಬಾಲಕ.  ಸೋನೇಶ್‌ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದು, ಪೋಷಕರು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದಾನೆ, ಇದೀಗ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಖಾಸಗಿ ಕ್ಲಿನಿಕ್ ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

Post a comment

No Reviews