ಮಧ್ಯಪ್ರದೇಶ: ಬೈಕ್ನಲ್ಲಿ ಬಂದ ಮೂವರು ಮುಸುಕುಧಾರಿ ವ್ಯಕ್ತಿಗಳು ವ್ಯಾಪಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ನಗದು ಹೊಂದಿದ್ದ ಬ್ಯಾಗ್ನೊಂದಿಗೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಪರಾಗ್ ಆಯಿಲ್ ಮಿಲ್ ಬಳಿ ನಿನ್ನೆ ನಡೆದಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಹಿತಿ ಪ್ರಕಾರ, ಸಂತ್ರಸ್ತ ರಾಜೇಂದ್ರ ಪ್ರಸಾದ್ ಗುಪ್ತಾ ತಂಬಾಕು ವ್ಯಾಪಾರಿಯಾಗಿದ್ದರು ಸಂಗ್ರಹಿಸಿದ ಹಣವನ್ನು ಬ್ಯಾಂಕ್ಗೆ ಜಮಾ ಮಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ದರೋಡೆಕೋರರು ಆತನ ವಾಹನಕ್ಕೆ ಡಿಕ್ಕಿ ಹೊಡೆದು ಆತನ್ನನ್ನು ಚರಂಡಿಗೆ ಬೀಳಿಸಿದ್ದಾರೆ. ನಂತರ ಹಣವಿದ್ದ ಬ್ಯಾಗನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.
Post a comment
Log in to write reviews