2024-09-19 04:46:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎನ್‌ಕೌಂಟರ್‌ಗೆ 8 ನಕ್ಸಲರ ಹತ್ಯೆ: ಒಬ್ಬ ಯೋಧ ಹುತಾತ್ಮ

ನವದೆಹಲಿ: ಅಬುಜ್ಮಾರ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ 8 ನಕ್ಸಲರನ್ನು ಹತ್ಯೆ ಮಾಡಲಾಗಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದು ಇಬ್ಬರು ಯೋಧರಿಗೆ ಗಾಯಗಳಾಗಿವೆ.
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಗುಂಡಿನ ಚಕಮಕಿ ನಡೆಯುತ್ತಿತ್ತು. ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಾಂತೇವಾಡ ಜಿಲ್ಲೆಗಳಲ್ಲಿ ಬರುವ ಗುಡ್ಡಗಾಡು ಅರಣ್ಯ ಪ್ರದೇಶವಾಗಿದೆ. ಭೌಗೋಳಿಕವಾಗಿ ಪ್ರತ್ಯೇಕವಾದ ಮತ್ತು ಹೆಚ್ಚಾಗಿ ಪ್ರವೇಶಿಸಲಾಗದ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.
ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ 4 ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

Post a comment

No Reviews