
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದರ ಬೆನ್ನಲ್ಲೇ ಒಂದೇ ದಿನದಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಬೆಂಗಳೂರಿನ 2 ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೌದು ಇಂದು ಮಧ್ಯಾಹ್ನ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದಾಗಿ ಕೆಲವೇ ಗಂಟೆಗಳ ಬಳಿಕ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಸಧ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರದ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್ನ್ನು ತಪಾಸಣೆ ಮಾಡಲಾಗುತ್ತಿದೆ. ಸದ್ಯ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದರು. ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ. ಈ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ರಾಜಕಾರಣಿಗಳು, ಗಣ್ಯ, ವ್ಯಕ್ತಿಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
Poll (Public Option)

Post a comment
Log in to write reviews