ಬೆಂಗಳೂರು : ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಗಾಂಧೀ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲು ಉದ್ದೇಶಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಕ್ಷಣದಿಂದ ಸ್ವಾತಂತ್ರ್ಯ ಹೋರಾಟದ ದಿಕ್ಕೆ ಬದಲಾಯಿತು.
ಈ ಹಿನ್ನಲೆ ಅ.2ರಂದು ಗಾಂಧೀ ಜಯಂತಿಯಂದು ಗಾಂಧೀ ಭವನದಿಂದ ಗಾಂಧಿ ಪ್ರತಿಮೆಯರೆಗೆ ಗಾಂಧೀ ನಡಿಗೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಳಿಕ ವಿಧಾನಸೌಧದ ಸೆನೆಟ್ ಹಾಲ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಲ್ಲಾ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿದೆ. ಇದೇ ರೀತಿಯ ಕಾರ್ಯಕ್ರಮ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ನಡೆಯಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಗಾಂಧೀಜಿ ಜನ್ಮದಿನದ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಪಕ್ಷಬೇಧ, ಜಾತಿಬೇಧ ಮರೆತು ಪಾಲ್ಗೊಳ್ಳಬೇಕು ಎಂದು ನುಡಿದ ಅವರು, ಅಂದು ಭಾರತದ ಧ್ವಜಕ್ಕೆ ಮಾತ್ರ ಅವಕಾಶವಿದ್ದು ಕನ್ನಡ ಧ್ವಜ, ಕಾಂಗ್ರೆಸ್ ಧ್ವಜಗಳಿಗೆ ಅವಕಾಶವಿರುವುದಿಲ್ಲ. ನಡಿಗೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಗಾಂಧಿ ಟೋಪಿ ಧರಿಸಿ ಧ್ವಜ ಕೈಯಲ್ಲಿ ಹಿಡಿದು ಹೆಜ್ಜೆ ಹಾಕಲಿದ್ದಾರೆ ಎಂದರು.
Post a comment
Log in to write reviews