
ಮಡಿಕೇರಿ: ಹೃದಯಾಘಾತದಿಂದ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ದರೂ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Poll (Public Option)

Post a comment
Log in to write reviews