2024-12-24 05:55:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಓರ್ವ ಬೈಕ್ ಸವಾರನ ಸಾವು

ಬಾಗಲಕೋಟೆ:  ಬನಹಟ್ಟಿ ಹೊರ ವಲಯದ ಹೊಸೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮಲ್ಲಿಕಾರ್ಜುನ (22) ಮೃತ ಪಟ್ಟಿದ್ದಾರೆ. ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಲೆ, ಮುಖ ಭಾಗಕ್ಕೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಇವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯಲ್ಲಿ ರಮೇಶ್, ಕಲ್ಮೇಶ್, ಶ್ರೀಶೈಲ್ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಲ್ಲಿಕಾರ್ಜುನ್ ಸೇರಿ ಈ ಮೂವರು ಕುಳಲಿ ಗ್ರಾಮದ ನಿವಾಸಿಗಳಾಗಿದ್ದಾರೆ. ಮಲ್ಲಿಕಾರ್ಜುನ್ ಕುಳಲಿಯಿಂದ ಬನಹಟ್ಟಿಗೆ ಇಬ್ಬರು ಸ್ನೇಹಿತರೊಂದಿಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a comment

No Reviews