
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ಸಚಿವ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆಯಲ್ಲಿ ತೆರಳಿದ ಬಿಜೆಪಿ ಮುಖಂಡರು, ನಂತರ ರಾಜ್ಯಪಾಲರನ್ನು ಭೇಟಿಯಾಗಿದೆ ದೂರು ಸಲ್ಲಿಸಿದರು.
ದೂರು ಸಲ್ಲಿಸಿದ ನಂತರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜಿನಾಮೆ ಸಲ್ಲಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ, ಶಾಸಕರಾದ ಕೆ .ಗೋಪಾಲಯ್ಯ, ಅಶ್ವಥ್ ನಾರಾಯಣ, ಭೈರತಿ ಬಸವರಾಜ್, ರವಿಕುಮಾರ್, ಹಾಗೂ ಸಪ್ತಗಿರಿ ಗೌಡ ಪ್ರಮುಖ ಮುಖಂಡರು ಹಾಜರಿದ್ದರು.
Poll (Public Option)

Post a comment
Log in to write reviews