
ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಲೇ ಕುಸಿದು ಬಿದ್ದು 17 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಛತ್ತೀಸ್ಗಢ ರಾಜಧಾನಿ ರಾಯಪುರದಲ್ಲಿ ಬುಧವಾರ ನಡೆದಿದೆ. ಮೃತನನ್ನು ಸತ್ಯಂ ರಹಗಡಲೆ ಎಂದು ಗುರುತಿಸಲಾಗಿದೆ.
ಇಲ್ಲಿನ ಖಮತ್ರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾನ್‌ಪುರಿ ನಿವಾಸಿಯಾದ ಸತ್ಯಂ ನಿತ್ಯ ಜಿಮ್ಗೆ ಹೋಗುತ್ತಿದ್ದ. ಎಂದಿನಂತೆ ಬುಧವಾರ ಬೆಳಗ್ಗೆ ಕೂಡ ಹೋಗಿದ್ದು, ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಾದ ಬಳಿಕ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಅಷ್ಟರಲ್ಲೇ, ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಶಿವನಾರಾಯಣ್ ಸಿಂಗ್ ತಿಳಿಸಿದ್ದಾರೆ.
ಸದ್ಯ ಯುವಕ ಸತ್ಯಂ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದರ ವೈದ್ಯಕೀಯ ವರದಿ ಬಂದ ಬಳಿಕವೇ ಸಾವಿನ ನಿಖರ ಮಾಹಿತಿ ತಿಳಿಯಲಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews