
ಬೆಂಗಳೂರು: ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ. ಸುಹಾಸ್ ಗೌಡ (5) ಮೃತ ದುರ್ದೈವಿಯಾಗಿದ್ದಾರೆ.
ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್‌ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸಿರಲಿಲ್ಲ.
ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಕರಣದ ಕುರಿತು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್‌ಐಆರ್ ದಾಖಲಾಗಿದೆ. ಇನ್ನೂ ಘಟನೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Poll (Public Option)

Post a comment
Log in to write reviews