
ಉಡುಪಿ: ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿದ್ದು, ಜನರು ಸಾಕಷ್ಟು ಪರದಾಟ ನಡೆಸಿದ್ದಾರೆ.
ಭಾರೀ ಪ್ರವಾಹದಿಂದ ಕೊಚ್ಚಿ ಹೋದ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್ಗಳು ಕೊಚ್ಚಿಹೋಗಿವೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದೆ.
Poll (Public Option)

Post a comment
Log in to write reviews