
ಮಂಗಳೂರು: ಎಂಜಿ ರಸ್ತೆಯ 9 ಅಂತಸ್ತಿನ ಹೊಟೇಲ್ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿರುವುದಾಗಿ ವರದಿಯಾಗಿದೆ.
ಬಹುಮಹಡಿಯ ಹೊಟೇಲಿನ ಕಿಚನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗವು ಕಾರ್ಯಾಚರಣೆ ಆರಂಭಿಸಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆಯ ಕ್ರಮವಾಗಿ ಸಿಬ್ಬಂದಿ ವರ್ಗವನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews