
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾಗೌಡಗೆ ಬೆಂಗಳೂರು ಕೇಂದ್ರ ಕಾರಾಗೃಹದ ಅಧಿಕಾರಿಗಳು ವಿಚಾರಣಾಧೀನ ಖೈದಿ ನಂಬರ್ 6024ನ್ನು ನೀಡಿದ್ದಾರೆ.
ಐಷಾರಾಮಿ ಜೀವನ ನಡೆಸುತ್ತಿದ್ದ A1 ಆರೋಪಿ ಪವಿತ್ರಾ ಜೈಲು ಸೇರಿದ ದಿನದಿಂದ ಇಲ್ಲಿಯವರೆಗೆ ರಾತ್ರಿಯಿಡೀ ನಿದ್ದೆ ಮಾಡಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ. ಅಂತೆಯೇ, ಜೈಲಿನಲ್ಲಿ ನನಗೆ ಅದು ಬೇಕು, ಇದು ಬೇಕು ಎಂದು ಸಣ್ಣ ಪುಟ್ಟ ವಿಚಾರಕ್ಕೆ ಪವಿತ್ರಾಗೌಡ ಜೈಲು ಮಹಿಳಾ ಸಿಬ್ಬಂದಿ ಜೊತೆ ಕಿರಿಕ್ ತೆಗೆಯುತ್ತಿದ್ದಾರೆ. ಉಪ್ಪು, ಖಾರ ಇಲ್ಲದ ಊಟ ನನಗೆ ಬೇಡ ಎಂದು ಗಲಾಟೆ ಮಾಡಿತ್ತಿದ್ದಾರೆ. ಮಲಗಲು ನನಗೆ ಮನೆಯ ಬ್ಲಾಂಕೆಟ್ಟೇ ಬೇಕು ಎಂದು ಹಠ ಹಿಡಿದು ಕುಳಿತಿದ್ದಾರಂತೆ. ಅದಕ್ಕೆ ಪ್ರತ್ಯುತ್ತರವಾಗಿ ಇದು ನಿನ್ನ ಮನೆಯಲ್ಲ ಜೈಲು ಎಂದು ಸಿಬ್ಬಂದಿ ಎಚ್ಚರಿಸಿದ್ದಾರೆ. ಸದ್ಯ ಜೈಲಿನಲ್ಲಿ ಯಾವುದೇ ಐಷಾರಾಮಿ ಸೌಕರ್ಯ ಸಿಗದೇ ಪವಿತ್ರಾಗೌಡ ಪರಿತ್ತಪಿಸುತ್ತಿದ್ದಾರೆ.
Poll (Public Option)

Post a comment
Log in to write reviews