2024-09-19 04:59:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡುವಂತೆ ಯುವಕನಿಂದ ಜಿಲ್ಲಾಧಿಕಾರಿಗೆ ಪತ್ರ

ಕೊಪ್ಪಳ: ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಯುವಕನೊಬ್ಬ ಮನವಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ. 
ಇಂದು (ಜೂನ್‌ 26) ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣದ ನಿವಾಸಿ ಸಂಗಪ್ಪ ಎಂಬಾತ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್‌ ಅವರಿಗೆ ಅರ್ಜಿ ನೀಡಿ, ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದೇನೆ. ಆದರೆ ಇಲ್ಲಿವರಗೆ ಯಾವುದೇ ಹುಡುಗಿ ಮದುವೆ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಹೀಗಾಗಿ ಸರ್ಕಾರದಿಂದ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆ ಮೂಲಕ ರೈತರ ಮಕ್ಕಳ ಬಾಳು ಬೆಳಗಲು ನೆರವಾಗಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಯುವಕನ ಮನವಿ ಕೇಳಿ ಶಾಕ್ ಆದ ಜಿಲ್ಲಾಧಿಕಾರಿ ಈ ಬಗ್ಗೆ ಪರಿಶೀಲನೆ ಮಾಡ್ತೀವಿ ಎಂದು ಹೇಳಿ ಅರ್ಜಿ ಪಡೆದಿದ್ದಾರೆ.

Post a comment

No Reviews