2024-12-24 06:25:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಅಧಿಕಾರಿ ಸಾವಿಗೆ ಸಚಿವರೆ ಕಾರಣ 

ಶಿವಮೊಗ್ಗ: ಬಹುಕೋಟಿ ಹಗರಣ ಪ್ರಸ್ತಾಪಿಸಿ ಸರ್ಕಾರಿ ನೌಕರರೊಬ್ಬರು ಸುದೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಸಚಿವರ ಪಾತ್ರ ಇರುವುದು ಕೂಡ ಉಲ್ಲೇಖವಾಗಿದೆ.  ಆತ್ಮಹತ್ಯೆ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಡೆತ್ ನೋಟ್ ನಲ್ಲಿ ಪ್ರಸ್ತಾಪಿಸಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವ ಖಾದಿಭವನದ ಕಟ್ಟಡದಲ್ಲಿರುವ  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತವಿದೆ. ಇಲ್ಲಿ ನಡೆದಿರುವ ಅವ್ಯವಹಾರ, ಇದರಲ್ಲಿ ಸಚಿವರ ಮೌಖಿಕ ಆದೇಶವೇ ಈಗ ಚರ್ಚಿತ ವಿಷಯವಾಗಿದೆ. ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಆರು ಪುಟದ ಡೆತ್ ನೋಟಿನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು 85 ಕೋಟಿ ಹಣ ಅವ್ಯವಹಾರ ಮಾಡಿಕೊಂಡಿರುವ ಅಕ್ರಮವನ್ನ ತೆರೆದಿಟ್ಟಿರುವ ಚಂದ್ರಶೇಖರ್ , ಇದಕ್ಕೆ ಕಾರಣರಾದ ಅಧಿಕಾರಿಗಳ ಹೆಸರನ್ನ ಬರೆದು ಸಾವಿಗೂ ಹಾಗೂ ಅಕ್ರಮಕ್ಕೆ ಅವರೇ ಕಾರಣ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. 
ಇನ್ನು ಗಂಡನ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು, ಸೂಕ್ತ ತನಿಖೆ ನಡೆಸಬೇಕು ಎಂದು ಮೃತರ ಪತ್ನಿ ಕವಿತಾ ಆಗ್ರಹಿಸಿ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.                

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ನಿಗಮದಲ್ಲಿ ಆಗಿರುವ ಅವ್ಯವಹಾರವನ್ನು ಬಿಚ್ಚಿಟ್ಟಿದ್ದಾರೆ. ಇಲಾಖಾ ಖಾತೆಯ ಹಣವನ್ನು ನಿಗಮದ ಅಧಿಕಾರಿಗಳು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ. ಇನ್ನು ತಾನು ಹೇಡಿಯಲ್ಲ, ಆದರೆ ಅವಮಾನ ಸಹಿಸಲು ಆಗುತ್ತಿಲ್ಲ. ನಡೆದ ಅಕ್ರಮ ವಹಿವಾಟಿಗೆ ತಾವು ಕಾರಣರಲ್ಲ, ನಿಗಮದ ಎಂಡಿ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬ ಅಧಿಕಾರಿಗಳೇ ಅಕ್ರಮವೆಸಗಿದ್ದಾರೆ. ಇದೇ ಕಾರಣಕ್ಕಾಗಿ ನೇಣಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ಉಲ್ಲೇಖ ಮಾಡಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇನ್ನೂ ಡೆತ್ ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದ ಮೇಲೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಬರೆದಿದ್ದಾರೆ. ಹಾಗಾಗಿ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಸಚಿವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಆಗ್ರಹಿಸುತ್ತೇವೆ ಎಂದು ಶಿವಮೊಗ್ಗ ಶಾಸಕ ಚನ್ನಬಸಪ್ಪ ಹೇಳಿದ್ದಾರೆ.

Post a comment

No Reviews