
ಹೈದರಾಬಾದ್: ಕಡಪ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಮಾಧವರಂ-1 ಗ್ಯಾಸ್ ಗೋದಾಮಿನಲ್ಲಿ ಡೀಸೆಲ್ ಲಾರಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.
Poll (Public Option)

Post a comment
Log in to write reviews