ಹಿಂದೂ, ರಾಮಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಗೆಳತಿಯ ಮತಾಂತರಕ್ಕೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿ ಬಂಧನ!

ಉಡುಪಿ: ಹಿಂದೂ ಧರ್ಮ ಹಾಗೂ ರಾಮಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಬಂಧಿತನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಡ್ಯಾನಿಷ್ ಸಹಪಾಠಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್‌ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದನು. ಅಲ್ಲಿ ಅವನು ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿ ನಂತರ ಇಬ್ಬರೂ ಪರಸ್ಪರ ಡೇಟಿಂಗ್ ಮಾಡುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದನು ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನ ತಿರಸ್ಕರಿಸಿದ್ದಕ್ಕೆ ಗೆಳತಿಯ ಕಪಾಳಕ್ಕೆ ಹೊಡೆದು ಅಸಭ್ಯವಾಗಿ ವರ್ತಿಸಿದ್ದಾನೆ. ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮೂಲಕ ಕಿರುಕುಳ ನೀಡಲಾರಂಭಿಸಿದ್ದ ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews