
ಮೂಡಿಗೆರೆ: ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬುಧವಾರ ರಾತ್ರಿ, ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆ ಕಂಡು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ. ಈ ಘಟನೆಯಿಂದಾಗಿ ಚಾರ್ಮಾಡಿ ಘಾ ಟಿಯಲ್ಲಿ ಸುಮಾರು ಎರಡು ಕಿ.ಮೀ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕಳೆದ ಎರಡು ತಿಂಗಳಿನಿಂದ ಕಾಡಾನೆಯೊಂದು ಅರಣ್ಯಪ್ರದೇಶದಲ್ಲಿ ಬೀಡು ಬಿಟ್ಟಿದ್ದು ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಅಲ್ಲದೆ ಪಕ್ಕದ ಗ್ರಾಮಗಳಿಗೂ ದಾಳಿ ಮಡುತ್ತಿದೆ. ಆದಷ್ಟು ಬೇಗ ಕಾಡಾನೆ ಸ್ಥಳಾಂತರಿಸುವಂತೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
Poll (Public Option)

Post a comment
Log in to write reviews