
ಪಂಜಾಬ್ : ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕೂದಲೆಳೆನ ಅಂತರದಲ್ಲಿ ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ಆಘಾತಕಾರಿ ಘಟನೆ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ. ಇನ್ನೂ ಕಟ್ಟಡ ಕುಸಿದು ಬೀಳುತ್ತಿದ್ದಂತೆ ಮಹಿಳೆ ತನ್ನ ಕೈಯಲ್ಲಿ ಪುಟ್ಟ ಮಗುವನ್ನು ಹಿಡಿದುಕೊಂಡು ಓಡಿ ಹೋಗಿದ್ದಾರೆ. ಅಂತಸ್ತಿನ ಕಟ್ಟಡ ಕುಸಿಯುತ್ತೀರುವ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸುಮಾರು 100 ವರ್ಷ ಹಳೆಯದಾದ ಕಟ್ಟಡ ಕುಸಿದು ಬಿದ್ದಿದ್ದು, ಮಹಿಳೆ, ಮಗು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಟ್ಟಡ ಕುಸಿದು ಬೀಳುತ್ತಿದ್ದಂತೆ ಸ್ಥಳೀಯರು ಪ್ರಾಣ ರಕ್ಷಣೆಗಾಗಿ ಓಡಲು ಆರಂಭಿಸಿದ್ದಾರೆ.
Poll (Public Option)

Post a comment
Log in to write reviews